ಗೃಹ ಲಕ್ಷ್ಮಿ
(ರೂ.2000/- ಕುಟುಂಬದ ಮಹಿಳಾ ಮುಖ್ಯಸ್ಥರಿಗೆ) - ಸಾಮಾನ್ಯ ಮಾಹಿತಿ
×
ಗೃಹ ಲಕ್ಷ್ಮಿ ಯೋಜನೆಯ ನಿಯಮಗಳು ಮತ್ತು ಷರತ್ತುಗಳು | ಗೃಹ ಲಕ್ಷ್ಮಿ ಯೋಜನೆಯ ಸರ್ಕಾರದ ಆದೇಶ-1 | ಗೃಹ ಲಕ್ಷ್ಮಿ ಯೋಜನೆಯ ಸರ್ಕಾರದ ಆದೇಶ-2 |
ಯೋಜನೆಯ ವೇಳಾಪಟ್ಟಿಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ |
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲಾಗಿದೆ.
ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು (ಎರಡು ಸಾವಿರ ರೂಪಾಯಿಗಳು ಮಾತ್ರ) ನೀಡುವ “ಗೃಹ ಲಕ್ಷ್ಮಿ” ಯೋಜನೆಯನ್ನು 2023-24ನೇ ಸಾಲಿನಲ್ಲಿ ಈ ಕೆಳಕಂಡಂತೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಸರ್ಕಾರದ ಆದೇಶ ಸಂಖ್ಯೆ: ಮಮ ಇ 70 ಮಮ ಅ 2023, ಬೆಂಗಳೂರು, ದಿನಾಂಕ: 6ನೇ ಜೂನ್ 2023 ರಂತೆ ಆದೇಶಿಸಿರುತ್ತದೆ.
ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳು
- ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
- ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.
- ಈ ಯೋಜನೆಯ ಫಲಾನುಭವಿಗಳು 2023ರ ಜುಲೈ 15 ರಿಂದ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.
- ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
- ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.
- ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
- ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು .
ಗೃಹ ಜ್ಯೋತಿ
(ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ವರೆಗೆ ಉಚಿತ ವಿದ್ಯುತ್) - ಸಾಮಾನ್ಯ ಮಾಹಿತಿ
×
ಗೃಹ ಜ್ಯೋತಿ ಯೋಜನೆಯ ನಿಯಮಗಳು ಮತ್ತು ಷರತ್ತುಗಳು | ನೋಂದಣಿ ಪ್ರಕ್ರಿಯೆಯು ಜೂನ್ 18 ರಿಂದ ಪ್ರಾರಂಭವಾಗಿದೆ |
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ |
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಒದಿಸಲು ತಾತ್ವಿಕ ಅನುಮೋದನೆ ನೀಡಿದೆ.
“ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.
ಈ ಯೋಜನೆಯನ್ನು ಜುಲೈ 2023 ರ ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್ 2023 ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ /164/ಪಿಎಸ್ ಆರ್ / 2023, ದಿನಾಂಕ: 05.06.2023, ಬೆಂಗಳೂರು ರಂತೆ ಆದೇಶಿಸಿದೆ.
- ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
- ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.
- ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು.
- ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
- ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
- ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.
- ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.
- ದಿನಾಂಕ: 30.06.2023 ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
- ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
- ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
ಶಕ್ತಿ
(ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ
ಉಚಿತ ಪ್ರಯಾಣ)
×
ಶಕ್ತಿ ಯೋಜನೆಯ ನಿಯಮಗಳು ಮತ್ತು ಷರತ್ತುಗಳು | ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ |
ನೋಂದಣಿ ಪ್ರಕ್ರಿಯೆಯನ್ನು ಶೀರ್ಘದಲ್ಲೇ ಆರಂಭಿಸಲಾಗುವುದು
ಯುವನಿಧಿ
( ನಿರುದ್ಯೋಗಿ ಪದವೀಧರರಿಗೆ ಮಾಸಿಕ ರೂ.3000 ಭತ್ಯೆ ಮತ್ತು ನಿರುದ್ಯೋಗಿ ಡಿಪ್ಲೊಮಾ ಹೊಂದಿರುವವರಿಗೆ ರೂ. 1500/- ಭತ್ಯೆ)
×
ಯುವನಿಧಿ ಯೋಜನೆಯ ನಿಯಮಗಳು ಮತ್ತು ಷರತ್ತುಗಳು | ಅರ್ಜಿಯ ನಮೂನೆಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ |